ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಟ್ರಾಫಿಕ್, ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಮಹಾನಗರ ಪಾಲಿಕೆ ನಿರ್ಧಾರ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಜನದಟ್ಟಣೆಯ ಪ್ರಮಾಣ ಹೆಚ್ಚಾಗುತ್ತಿದ್ದು,ಅದೇ ರೀತಿ ವಾಹನ ಸಂಚಾರ ಕೂಡ ಹೆಚ್ಚಾಗಿದ್ದು,ಇದರಿಂದ ಸಾಕಷ್ಟು ಟ್ರಾಫಿಕ್ ಕಿರಿ ಕಿರಿ ಉಂಟಾಗುತ್ತಿದ್ದು,ಈಗ ಹು-ಧಾ ಮಹಾನಗರ ಪಾಲಿಕೆ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಮುಂದಾಗಿದೆ.

ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರದಲ್ಲಿ ಸೈಕ್ಲಿಂಗ್ ಉತ್ತೇಜನ ನೀಡಲು ಮುಂದಾಗಿದೆ.ಇದರಿಂದ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ ವಾಯುಮಾಲಿನ್ಯವನ್ನು ಕೂಡ ತಗ್ಗಿಸಬಹುದಾಗಿದೆ.

ಈಗಾಗಲೇ ಗೋಕುಲ ರಸ್ತೆ ಹಾಗೂ ಶಿರೂರ ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಸೈಕ್ಲಿಂಗ್ ಉತ್ತೇಜನಕ್ಕಾಗಿಯೇ ಸೈಕ್ಲಿಂಗ್ ಪಾತ್ ವ್ಯವಸ್ಥೆ ಕೂಡ ಮಾಡಲಾಗಿದ್ದು,ಇದರಿಂದ ಅವಳಿನಗರದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಬಹುದಾಗಿದೆ.

ಎಲ್ಲೆಂದರಲ್ಲಿ ಅವ್ಯವಸ್ಥೆ ಪಾರ್ಕಿಂಗ್ ಹಾಗೂ ಅವ್ಯವಸ್ಥಿತ ಸಂಚಾರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಹು-ಧಾ ಮಹಾನಗರ ಪಾಲಿಕೆ ಮುಂದಾಗಿದ್ದು,ಶೀಘ್ರವಾಗಿ ಈ ಯೋಜನೆ ಜಾರಿಗೊಂಡಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

Edited By : Manjunath H D
Kshetra Samachara

Kshetra Samachara

05/11/2020 06:01 pm

Cinque Terre

35.16 K

Cinque Terre

3

ಸಂಬಂಧಿತ ಸುದ್ದಿ