ಧಾರವಾಡ: ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಹಾಗೂ ಮನೆಯ ಮುಂದಿನ ವಿದ್ಯುತ್ ಕಂಬಗಳಲ್ಲಿ ಹಗಲು ಹೊತ್ತಿನಲ್ಲೇ ಬೀದಿ ದೀಪಗಳು ಉರಿಯುವ ಮೂಲಕ ವಿದ್ಯುತ್ ಪೋಲಾಗುತ್ತಿದ್ದರೂ ಹೆಸ್ಕಾಂ ಸಿಬ್ಬಂದಿ ಮಾತ್ರ ತಲೆ ಕೆಡಿಸಿಕೊಂಡಿಲ್ಲ.
ಹೌದು! ಬಾಲಭವನದ ರಸ್ತೆಯಿಂದ ಹಿಡಿದು ಜಿಲ್ಲಾಧಿಕಾರಿ ಕಚೇರಿವರೆಗೆ ಇರುವ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳು ಗುರುವಾರ ಬೆಳಿಗ್ಗೆಯಿಂದಲೇ ಉರಿಯುತ್ತಿದ್ದು, ಯಾರೂ ತಲೆಕೆಡಿಸಿಕೊಂಡಿಲ್ಲ.
ಕೂಡಲೇ ಹೆಸ್ಕಾಂ ಸಿಬ್ಬಂದಿ ಎಚ್ಚೆತ್ತುಕೊಂಡು ಈ ರೀತಿ ಪೋಲಾಗುವುದನ್ನು ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
Kshetra Samachara
12/11/2020 09:54 pm