ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಮಕ್ಕಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಹುಬ್ಬಳ್ಳಿ: ಮಕ್ಕಳ ದಿನಾಚರಣೆಯ ಅಂಗವಾಗಿ ಕುಸುಗಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಓ ಡಾ.ಬಿ.ಸುಶೀಲಾ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಾಗಿ ನೀಡುತ್ತಿರುವ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಿಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ

ರಾಜ್ಯ ಸರಕಾರ ನಿರ್ದೇಶನದಂತೆ 10 ವಾರಗಳ ಕಾಲ ವಿನೂತನ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗುವುದು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ ಆಯೋಜಿಸಲಾಗುವುದು. ಗ್ರಂಥಾಲಯ ಸದ್ಬಳಕೆ ಕುರಿತು ಓದುವ ಬೆಳಕು ಕಾರ್ಯಕ್ರಮ ಆರಂಭಿಸಲಾಗಿದೆ. ಮಕ್ಕಳ ಹಕ್ಕುಗಳು, ಪೌಷ್ಟಿಕಾಂಶಗಳು, ವೈಜ್ಞಾನಿಕ ಮನೋಭಾವ ಮಕ್ಕಳಲ್ಲಿ ಬೆಳಸಲು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ. ಪಂ. ಉಪಾಧ್ಯಕ್ಷ ಶಿವಾನಂದ ಕರಿಗಾರ, ತಾ.ಪಂ. ಇಓ ಗಂಗಾಧರ ಕಂದಕೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಕ್ಷೇತ್ರಶಿಕ್ಷಣಾಧಿಕಾರಿ ಅಶೋಕ ಕುಮಾರ ಸಿಂದಗಿ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಬಸವರಾಜ ಮಾಯಾಚಾರ್ಯ, ಸಹಾಯಕ ನಿರ್ದೇಶಕ ಶ್ರೀಧರ ಪತ್ತಾರ ಮತ್ತು ಗಣ್ಯರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

14/11/2020 08:28 pm

Cinque Terre

76.49 K

Cinque Terre

5

ಸಂಬಂಧಿತ ಸುದ್ದಿ