ಹುಬ್ಬಳ್ಳಿ: ಕರ್ನಾಟಕ ರಾಜ್ಯದಲ್ಲಿ ಮರಾಠಾ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದಿಂದ ಹುಬ್ಬಳ್ಳಿ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಮರಾಠಾ ಪ್ರಾಧಿಕಾರದ ಸ್ಥಾಪನೆಗೆ ಮುಂದಾಗಿರುವುದು ಕನ್ನಡ ನಾಡು ನುಡಿ ಮತ್ತು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ.ಕೂಡಲೇ ಸರ್ಕಾರ ಕನ್ನಡಿಗರ ವಿರೋಧಿ ನೀತಿಯನ್ನು ಕೈಬಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
17/11/2020 11:57 am