ಹುಬ್ಬಳ್ಳಿ :ಉತ್ತರ ಕರ್ನಾಟಕದ ವಾಣಿಜ್ಯ ಬೆಳೆಯಾಗಿರುವ ಹತ್ತಿಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು,ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹತ್ತಿ ಖರೀದಿ ಕೇಂದ್ರವನ್ನ ಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯ ಹಸಿರು ಸೇನೆ ಹಾಗೂ ಕಳಸಾ ಬಂಡೂರಿ ಹೋರಾಟಗಾರರಿಂದ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯ ಕಾಟನ್ ಮಾರ್ಕೆಟ್ ಹತ್ತಿರ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಹತ್ತಿ ಖರೀದಿ ಕೇಂದ್ರ ವಿಳಂಬ ನೀತಿ ಖಂಡಿಸಿ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಯಾದಗಿರಿ ರೈತರು ಮತ್ತು ಧಾರವಾಡ ರೈತ ಸಮಿತಿಯಿಂದ ಪ್ರತಿಭಟನೆ ನಡೆಸಿದ ರೈತರು
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಅಸಮಾಧಾನ ಹೊರಹಾಕಿದರು. ಮಧ್ಯವರ್ತಿಗಳ ಕೈಚಳಕವನ್ನು ನಿಯಂತ್ರಣ ಮಾಡುವಲ್ಲಿ ಸರ್ಕಾರ ಮುಂದಾಗುವ ಮೂಲಕ ರೈತ ಸಮುದಾಯದ ಹಿತವನ್ನು ಕಾಪಾಡಬೇಕಿದೆ ಎಂದು ಆಗ್ರಹಿಸಿದರು.
Kshetra Samachara
18/11/2020 01:25 pm