ಹುಬ್ಬಳ್ಳಿ: ಪ್ರತ್ಯೇಕವಾಗಿ ಎಸ್.ಎಸ್.ಕೆ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆಗ್ರಹಿಸಿದರು ಹುಬ್ಬಳ್ಳಿಯ ಶ್ರೀ ಸಹಸ್ರಾರ್ಜುನ ಎಸ್.ಎಸ್.ಕೆ ಸಮಾಜದ ಯುವಕರ ಸಂಘದ ವತಿಯಿಂದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಎಸ್.ಎಸ್.ಕೆ ಸಮಾಜ ಕೂಡ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಅಲ್ಲದೇ ಎಸ್.ಎಸ್.ಕೆ ಸಮಾಜದ ಬಹುತೇಕ ಜನರು ಅಭಿವೃದ್ಧಿಯಿಂದ ವಂಚಿತರಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಎಸ್.ಎಸ್.ಕೆ ಸಮಾಜವನ್ನು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಅಭಿವೃದ್ಧಿಗೊಳಿಸುವಲ್ಲಿ ರಾಜ್ಯಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
20/11/2020 12:57 pm