ಹುಬ್ಬಳ್ಳಿ: ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಬೇಕು ಹಾಗೂ ಬೆಳಗಾವಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲಿಗೆ ದಿ.ಸುರೇಶ ಅಂಗಡಿ ಹೆಸರಿಡಬೇಕು ಎಂದು ಆಗ್ರಹಿಸಿ ಹು-ಧಾ ಲಿಂಗಾಯತ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಲಿಂಗಾಯತ ಸಮುದಾಯದವರು ಸಾಕಷ್ಟು ಹಿಂದುಳಿದಿದ್ದು,ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶೇ.16 ರಷ್ಟು ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದು,ಅಲ್ಲದೇ ಅಭಿವೃದ್ಧಿ ಕಾರ್ಯವನ್ನು ಕೂಡ ಮಾಡಿದ್ದಾರೆ. ಈ ನಿಟ್ಟಿನಲ್ಲಿ ದಿ.ಸುರೇಶ ಅಂಗಡಿಯವರ ಹೆಸರನ್ನು ಬೆಳಗಾವಿ-ಬೆಂಗಳೂರು ವಿಶೇಷ ರೈಲಿಗೆ ನಾಮಕರಣ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
Kshetra Samachara
20/11/2020 01:00 pm