ಧಾರವಾಡ: ಧಾರವಾಡದ ಗಾಂಧಿನಗರದ ರಸ್ತೆ ಕಾಮಗಾರಿ ಮಾಡುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ಗಾಂಧಿನಗರ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗಾಂಧಿನಗರ ಮುಖ್ಯರಸ್ತೆ ತೀರಾ ಹದಗೆಟ್ಟಿದ್ದು, ಸ್ಥಳೀಯ ಶಾಸಕರು ಈ ರಸ್ತೆ ಸರಿಪಡಿಸುವ ಗೋಜಿಗೆ ಹೋಗಿಲ್ಲ. ಈ ರಸ್ತೆ ನಿರ್ಮಾಣದ ಬಗ್ಗೆ ಈಗಾಗಲೇ ಯೋಜನೆ ಸಿದ್ಧಪಡಿಸಿದ್ದು, ಕಾಮಗಾರಿ ವಿಳಂಬವಾಗಿದೆ. ಕೂಡಲೇ ಈ ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಕೆಲ ಕಾಲ ಹುಬ್ಬಳ್ಳಿ, ಧಾರವಾಡ ರಸ್ತೆ ಮಧ್ಯೆ ಇರುವ ಈ ಗಾಂಧಿನಗರ ಸರ್ಕಲ್ ನಲ್ಲಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟಿಸಿದ್ದರಿಂದ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು.
Kshetra Samachara
23/11/2020 01:06 pm