ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಪಿಎಂಸಿಯಲ್ಲಿ ಇದ್ದು ಇಲ್ಲದಂತಾದ ಶುದ್ಧ ಕುಡಿಯುವ ನೀರಿನ ಘಟಕ.

ಅಣ್ಣಿಗೇರಿ : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಅವ್ಯವಸ್ಥೆಗೆ ಜಾರಿದ್ದರೂ ಕೂಡಾ ಸಂಭಂದಿಸಿದ ಅಧಿಕಾರಿಗಳು ಕಣ್ಮುಚ್ಚಿ ಕುಳಿತು ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯ ರೈತರು ಅಧಿಕಾರಿಗಳ ವಿರುದ್ಧ ಆರೋಪಿಸುತ್ತಿದ್ದಾರೆ.

ಹೌದು...ಪಟ್ಟಣದ ಎಪಿಎಂಸಿ ಮಾರುಕಟ್ಟೆ ಯಲ್ಲಿ ಸೋಮವಾರದಿಂದ ಆರಂಭಗೊಂಡ ಸಿಸಿಐ ಹತ್ತಿ ಖರೀದಿ ಕೇಂದ್ರಕ್ಕೆ ಬರುವ ರೈತರ ಗೋಳಾಗಿದೆ. 2015ರಲ್ಲಿ ಸುಮಾರು 1 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಈ ಶುದ್ಧ ಕುಡಿಯುವ ನೀರಿನ ಘಟಕ ಕೆಲ ದಿನಗಳಷ್ಟೆ ಮಾತ್ರ ನೀರನ್ನು ನೀಡಿ ನಂತರ ಸ್ಥಗಿತಗೊಂಡು ಕಾರ್ಯ ನಿರ್ವಹಣೆ ಮಾಡುತ್ತಿಲ್ಲ. ಪ್ರತಿದಿನ ಎಪಿಎಂಸಿ ಮಾರುಕಟ್ಟೆಗೆ ಹತ್ತಿ ಮಾರಾಟ ಮಾಡಲು ನೂರಾರು ರೈತರು ಆಗಮಿಸುತ್ತಿದ್ದಾರೆ. ಕುಡಿಯಲು ನೀರಿಲ್ಲದೇ ಎಪಿಎಂಸಿ ಹೊರಗಡೆ ಬರುವದು ಅನಿವಾರ್ಯವಾಗಿದೆ. ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದ್ದರೂ ಕೂಡಾ ಇದನ್ನು ಉಪಯೋಗಿಸುವಲ್ಲಿ ಕೆಲ ಅಧಿಕಾರಿಗಳು ಮೀನಾಮೇಷ ಮಾಡುತ್ತಿರುವದು ಮೆಲ್ನೋಟಕ್ಕೆ ಕಂಡು ಬರುತ್ತಿದೆ. ಇನ್ನೂ ಮುಂದಾದರು ಸಂಭಂದಿಸಿದ ಅಧಿಕಾರಿಗಳು ಈ ಶುದ್ಧ ಕುಡಿಯುವ ನೀರಿನ ಘಟಕದ ಕಡೆ ಗಮನ ಹರಿಸಿ ರೈತರಿಗೆ ಅನುಕೂಲ ಮಾಡಬೇಕು ಎಂದು ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

25/11/2020 11:31 am

Cinque Terre

14.58 K

Cinque Terre

0

ಸಂಬಂಧಿತ ಸುದ್ದಿ