ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಮಾಜಿಕ ಪರಿಶೋಧನೆಯ ಸಭೆ ಅಭಿವೃದ್ಧಿ ಬಗ್ಗೆ ಗ್ರಾಮಸ್ಥರ ಧ್ವನಿ

ಅಣ್ಣಿಗೇರಿ : ತಾಲೂಕಿನ ಭದ್ರಾಪುರ ಗ್ರಾಮದಲ್ಲಿ 1 ಮತ್ತು 2ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಗ್ರಾಮದ ದ್ಯಾಮವ್ವದೇವಿ ದೇವಸ್ಥಾನದ ಆವರಣದಲ್ಲಿ ನೆರವೇರಿತು.

ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿನಿರ್ಮಿಸಲಾದ ರಸ್ತೆ ಹಾಗೂ ಕುಟುಂಬಗಳ ಶೌಚಾಲಯ, ಇಂಗು ಗುಂಡಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ ತಾಪಂ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಯಾವುದೇ ಚಟುವಟಿಕೆಗಳ ಪೂರ್ವ ಮಾಹಿತಿಯನ್ನು ಗ್ರಾಮಸ್ಥರು ಪಡೆದುಕೊಂಡು ನಿಮ್ಮೂರಿನ ಅಭಿವೃದ್ಧಿಗೆ ಸಹಕರಿಸಿ ಎಂದು ಅಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಅಭಿವೃದ್ಧಿ ಆಗದೆ ಉಳಿದಂತಹ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರು ಧ್ವನಿ ಎತ್ತಿ ಅಲ್ಲಿನ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ತೋರಿಸಿ ಅಧಿಕಾರಿಗಳಿಗೆ ಅಭಿವೃದ್ಧಿಗೆ ಮನವಿ ಮಾಡಿದರು.

Edited By : Nagaraj Tulugeri
Kshetra Samachara

Kshetra Samachara

25/11/2020 01:36 pm

Cinque Terre

15.56 K

Cinque Terre

0

ಸಂಬಂಧಿತ ಸುದ್ದಿ