ಹುಬ್ಬಳ್ಳಿ: ಅದು ಜನರ ವಿರೋಧದ ನಡುವೆಯೂ ನಿರ್ಮಾಣಕ್ಕೆ ಮುಂದಾಗಿದ್ದ ಯೋಜನೆ.ಈ ನಿರ್ಮಾಣದ ಕುರಿತು ಸಾಕಷ್ಟು ಜನರು ಪಬ್ಲಿಕ್ ನೆಕ್ಸ್ಟ್ ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದರು.
ಈ ಕುರಿತು ಪಬ್ಲಿಕ್ ನೆಕ್ಸ್ಟ್ ವಿಸ್ತೃತ ವರದಿಯೊಂದನ್ನು ಭಿತ್ತರಿಸಿತ್ತು.ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಸಾರ್ವಜನಿಕರ ಮಾತಿಗೆ ಸಮ್ಮತಿ ಸೂಚಿಸಿದ್ದು,ಇದು ಪಬ್ಲಿಕ್ ನೆಕ್ಸ್ಟ್ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.ಹಾಗಾದರೆ ಏನು ಆ ವರದಿ ಅಂತೀರಾ ಈ ಸ್ಟೋರಿ ನೋಡಿ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಚಿಕ್ಕನೇರ್ತಿ ಗ್ರಾಮದಲ್ಲಿ ವಾಟರ್ ಟ್ಯಾಂಕ್ ಶಿಥಿಲಗೊಂಡಿತ್ತು.ಅಲ್ಲದೇ ಅದೇ ಸ್ಥಳದಲ್ಲಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮುಂದಾಗಿತ್ತು.
ಆದರೇ ಆ ಸ್ಥಳದಲ್ಲಿ ನಿರ್ಮಾಣ ಮಾಡುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು.ಅಲ್ಲದೇ ಅಲ್ಲಿಯ ಪ್ರದೇಶ ನಿರ್ಮಾಣಕ್ಕೆ ಸೂಕ್ತವಾಗಿಲ್ಲ ಎಂದು ಸಾರ್ವಜನಿಕರು ಸಾಕಷ್ಟು ಬಾರಿ ಮನವಿ ಮಾಡಿದ್ದರು.
ಈ ಕುರಿತು ಪಬ್ಲಿಕ್ ನೆಕ್ಸ್ಟ್ ವರದಿಯನ್ನು ಭಿತ್ತರಿಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳಿಗೆ ಮುಟ್ಟಿಸಿತ್ತು.ವರದಿಗೆ ಸ್ಪಂದಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಚಿಕ್ಕನೇರ್ತಿ ಗ್ರಾಮದಲ್ಲಿ ದಾನಿಗಳು ನೀಡಿದ ಸ್ಥಳದಲ್ಲಿ ವಾಟರ್ ಟ್ಯಾಂಕ್ ನಿರ್ಮಾಣ ಮಾಡಿದ್ದು,ಸಾರ್ವಜನಿಕರ ಸಂತೋಷಕ್ಕೆ ಕಾರಣವಾಗಿದೆ.
ಕಳೆದ ಸುಮಾರು ದಿನಗಳಿಂದ ನಿಮ್ಮ ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಯನ್ನು ಭಿತ್ತರಿಸಿದ ಪ್ರತಿಫಲದಿಂದ ನೂತನ ವಾಟರ್ ಟ್ಯಾಂಕ್ ನಿರ್ಮಾಣ ಮಾಡಿದ್ದು,ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ ಇದಾಗಿದೆ.ಸಾರ್ವಜನಿಕರ ಸಮಸ್ಯೆಗೆ ಧ್ವನಿಯಾಗಿರುವ ಪಬ್ಲಿಕ್ ನೆಕ್ಸ್ಟ್ ಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
26/11/2020 04:23 pm