ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ರೈಲು ನಿಲ್ದಾಣದ ಬಳಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಅಸ್ತು

ಧಾರವಾಡ: ಧಾರವಾಡದ ರೈಲು ನಿಲ್ದಾಣದ ಬಳಿ ರೈಲ್ವೆ ಓವರ್ ಬ್ರಿಜ್ (ಆರ್ ಓಬಿ) ನಿರ್ಮಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಅತ್ತಿಕೊಳ್ಳದ ಹತ್ತಿರ ರೈಲ್ವೆ ಓವರ್ ಬ್ರಿಜ್ ನಿರ್ಮಾಣ ಮಾಡುವ ಸಂಬಂಧ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡು, ಓವರ್ ಬ್ರಿಜ್ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.

16.68 ಕೋಟಿ ವೆಚ್ಚದ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದು, ಇದರಲ್ಲಿ ರಾಜ್ಯದ ಪಾಲು 8.9 ಕೋಟಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮ್ಮ ಫೇಸ್ ಬುಕ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

28/11/2020 09:44 am

Cinque Terre

46.24 K

Cinque Terre

8

ಸಂಬಂಧಿತ ಸುದ್ದಿ