ಹುಬ್ಬಳ್ಳಿ: ಸುಮಾರು ಐವತ್ತು ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನು ನೀಡದೇ ಇರುವುದನ್ನು ಖಂಡಿಸಿ ಮಂಟೂರ ಜೋಪಡಿ ಹಾಗೂ ವಲ್ಲಭಭಾಯಿ ನಗರದ ನಿವಾಸಿಗಳು ಹು-ಧಾ ಮಹಾನಗರ ಪಾಲಿಕೆ ವಲಯ ಕಚೇರಿಯ ಎದುರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ದಲಿತರು ಎಂದು ಸುಮಾರು ಐವತ್ತು ವರ್ಷಗಳಿಂದ ಯಾವುದೇ ಮೂಲಭೂತ ಸೌಕರ್ಯಗಳನ್ನು ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸರಿಯಾದ ಚರಂಡಿ,ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ನೀಡಿ ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
02/12/2020 01:53 pm