ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕರ್ನಾಟಕ ಬಂದ್ ಗೆ ಧಾರವಾಡದಲ್ಲಿ ಸಿಗದ ಬೆಂಬಲ

ಧಾರವಾಡ: ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಧಾರವಾಡದಲ್ಲಿ ಈ ಬಂದ್ ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲ ಕನ್ನಡಪರ ಸಂಘಟನೆಗಳೂ ಬೆಂಗಳೂರಿನಲ್ಲಿ ಈ ಬಂದ್ ಗೆ ಬೆಂಬಲ ಸೂಚಿಸಿವೆ. ಆದರೆ, ಧಾರವಾಡ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳು ಈ ಬಂದ್ ಗೆ ಬೆಂಬಲ ಸೂಚಿಸದೇ ನಾಮಕೆವಾಸ್ತೆ ಎಂಬಂತೆ ಜಿಲ್ಲಾಧಿಕಾರಿಗಳಿಗೆ ಕೇವಲ ಮನವಿ ಮಾತ್ರ ಸಲ್ಲಿಸಲಿವೆ.

ಧಾರವಾಡದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳ್ಳಂಬೆಳಿಗ್ಗೆ ಪೊಲೀಸರು ರಸ್ತೆಗಿಳಿದಿದ್ದಾರೆ. ಸಾರಿಗೆ ಸಂಸ್ಥೆ ಹಾಗೂ ಬೇಂದ್ರೆ ನಗರ ಸಾರಿಗೆ ಬಸ್ಸುಗಳು ಎಂದಿನಂತೆ ರಸ್ತೆಗಿಳಿದಿವೆ.

ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದ್ದು, ಜನ ಸಂಚಾರ ಎಂದಿನಂತೆ ಸಾಗಿದೆ. ಒಟ್ಟಾರೆ. ಈ ಬಂದ್ ಗೆ ಧಾರವಾಡದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ.

Edited By : Nirmala Aralikatti
Kshetra Samachara

Kshetra Samachara

05/12/2020 08:30 am

Cinque Terre

58.2 K

Cinque Terre

5

ಸಂಬಂಧಿತ ಸುದ್ದಿ