ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದಲ್ಲಿ ಜನ ಜೀವನ ಯಥಾಸ್ಥಿತಿಯಲ್ಲಿದ್ದು, ಅಂಗಡಿ ಮುಂಗಟ್ಟುಗಳು ಓಪನ್ ಆಗಿವೆ. ಆಟೋಗಳು, ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಬಸ್ ಗಳು ರಸ್ತೆಗೆ ಇಳಿದಿದ್ದು, ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ.
ಆದ್ರೆ ಬಂದ್ ಗೆ ಕೇವಲ ಬೆರಳೆಣಕೆಯಷ್ಟು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, 10 ಗಂಟೆ ಸುಮಾರಿಗೆ ಸಾಂಕೇತಿಕ ಪ್ರತಿಭಟನೆ ನಡೆಸಲು ಕೆಲ ಹೋರಾಟಗಾರರು ಮುಂದಾಗಿದ್ದಾರೆ.
ಆದ್ರೂ ಪೊಲೀಸರು ಮುಂಜಾಗೃತಾ ಕ್ರಮವಾಗಿ ಚೆನ್ನಮ್ಮ ವೃತ್ತದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ.
Kshetra Samachara
05/12/2020 09:00 am