ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದಾಶಿವ ವರದಿ ಜಾರಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿ

ಧಾರವಾಡ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆದಿಜಾಂಭವ ಸಂಘದ ಪದಾಧಿಕಾರಿಗಳು ಬುಧವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದರು.

ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು.

ರಾಜ್ಯದ ದಲಿತರಲ್ಲಿ ಬಹುಸಂಖ್ಯಾತರಾದ ಮಾದಿಗ ಸಮಾಜ ಕಳೆದ ಮೂರು ದಶಕಗಳಿಂದ ಒಳ ಮೀಸಲಾತಿ ಜಾರಿಗೊಳಿಸಲು ನಿರಂತರ ಹೋರಾಟಗಳನ್ನು ರಾಜ್ಯದಾದ್ಯಂತ ನಡೆಸುತ್ತ ಬಂದಿದೆ.

ಆದರೆ, ಸರ್ಕಾರಗಳು ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ಶತಮಾನಗಳಿಂದ ಆದಿಜಾಂಭವ ಸಮುದಾಯದ ಜನರು ಅಸ್ಪೃಶ್ಯರಾಗಿದ್ದು, ಶೋಷಣೆಗೆ ಒಳಗಾಗಿದ್ದಾರೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದ್ದಾರೆ.

ಸಂವಿಧಾನ ಬದ್ಧವಾಗಿ ದೊರೆತ ಮೀಸಲಾತಿ ವಂಚಿತ ಸಮುದಾಯಗಳಿಗೆ ಇನ್ನೂ ದೊರೆತಿಲ್ಲ ಎಂಬುದು ವಿಷಾಧಕರ ಸಂಗತಿ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಪೀಠ ಇತ್ತೀಚೆಗಷ್ಟೆ ಒಳ ಮಿಸಲಾತಿ ಜಾರಿಗೊಳಿಸಲು ಸೂಚಿಸಿದೆ.

ಆದರೆ, ಬಿಜೆಪಿ ಸರ್ಕಾರ ಇದಕ್ಕೆ ಹಿಂದೇಟು ಹಾಕುತ್ತಿದೆ ಎಂದು ದೂರಿದರು.

Edited By : Nirmala Aralikatti
Kshetra Samachara

Kshetra Samachara

09/12/2020 07:02 pm

Cinque Terre

14.71 K

Cinque Terre

0

ಸಂಬಂಧಿತ ಸುದ್ದಿ