ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ಮಾಡಿದ್ರೆ ಹುಷಾರ್..!

ಧಾರವಾಡ: ಶಾಲಾ, ಕಾಲೇಜುಗಳ ಬಳಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ, ಧೂಮಪಾನ ಮಾಡುವವರು ವಿರುದ್ಧ ಮತ್ತು ತಂಬಾಕು ಉತ್ಪನ್ನಗಳನ್ನು ನಿಯಮಬಾಹಿರವಾಗಿ ಮಾರಾಟ ಮಾಡುವವರ ವಿರುದ್ಧ ಕೋಟ್ಪಾ ಕಾಯ್ದೆಯ ಸೆಕ್ಷನ್ 4 ಹಾಗೂ 6ರಡಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಐಪಿಸಿ) 188, 268, 269 ಹಾಗೂ 270 ರಡಿ ನಗರ ಸ್ಥಳೀಯ ಸಂಸ್ಥೆಗಳು ಪ್ರಕರಣ ದಾಖಲಿಸಿ ಕಠಿಣ ಕ್ರಮಕೈಗೊಳ್ಳಬೇಕು.

ಪಾನ್ ಶಾಪ್ ಗಳಲ್ಲಿ ಮಾಸ್ಕ್ ಬಳಸದಿರುವವರಿಗೂ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಾಗ ಅವುಗಳ ಪ್ಯಾಕುಗಳ ಮೇಲೆ ಅವುಗಳ ಸೇವನೆಯಿಂದ ಉಂಟಾಗುವ ಹಾನಿಯ ಅಪಾಯ ಬಿಂಬಿಸುವ ಸಚಿತ್ರ ಮಾಹಿತಿ ಶೇ.85 ರಷ್ಟು ಇರುವುದು ಕಡ್ಡಾಯವಾಗಿದೆ.

ಪಾನ್ ಶಾಪುಗಳ ಮುಂಭಾಗದಲ್ಲಿ ಲೈಟರು, ಬೆಂಕಿಪೊಟ್ಟಣಗಳನ್ನು ಇಡುವುದೂ ಕೂಡ ಅಪರಾಧವಾಗಿದೆ ಇದನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ದಾಳಿಗಳ ಪ್ರಮಾಣ ಹೆಚ್ಚಾಗಬೇಕು ಎಂದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಆರೋಗ್ಯ, ಪೊಲೀಸ್, ನಗರ ಸ್ಥಳೀಯ ಸಂಸ್ಥೆಗಳು, ವಾಕರಸಾಸಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಗಳ ತಾಲೂಕುವಾರು ಪ್ರಗತಿ ಪರಿಶೀಲಿಸಿದರು.

Edited By : Nirmala Aralikatti
Kshetra Samachara

Kshetra Samachara

10/12/2020 12:50 pm

Cinque Terre

16.68 K

Cinque Terre

9

ಸಂಬಂಧಿತ ಸುದ್ದಿ