ಹುಬ್ಬಳ್ಳಿ: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿಂದು ಸಾರಿಗೆ ನೌಕರರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.
ಸಾರಿಗೆ ನೌಕರರು ಸುಮಾರು ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ದುಡಿಯುತ್ತಿದ್ದರೂ ಕೂಡ ಸರ್ಕಾರಿ ನೌಕರರು ಎಂದು ಪರಿಗಣಿಸಲಿಲ್ಲ. ಸರ್ಕಾರ ಕೂಡಲೇ ನಮ್ಮ ಅಳಲನ್ನು ಆಲಿಸಿ ನಮ್ಮನ್ನು ಕೂಡ ಸರ್ಕಾರಿ ನೌಕರರು ಎಂದು ಪರಿಗಣಿಸಿ ಆದೇಶ ಹೊರಡಿಸಬೇಕು ಎಂದು ಪ್ರತಿಭಟನೆ ನಡೆಸಿದರು.
ನ್ಯಾಯ ದೊರಕಿಸಿಕೊಡಿ ಎಂದು ಪ್ರತಿಭಟಿಸುತ್ತಿರುವ ನೌಕರರು,8ಕ್ಕೂ ಹೆಚ್ಚು ಬಸ್ ಗಳನ್ನ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಇನ್ನೂ ವಾಹನ ಚಾಲಕರು ಹಾಗೂ ನಿರ್ವಾಹಕರು ಭಾಗಿಯಾಗಿದ್ದರು.
Kshetra Samachara
11/12/2020 11:59 am