ಧಾರವಾಡ: ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಧಾರವಾಡದ ಬಿಆರ್ ಟಿಎಸ್ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.
ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಚಿಗರಿ ಬಸ್ಸುಗಳು ಕೂಡ ಇಂದು ಕಾರ್ಯನಿರ್ವಹಿಸದೇ ಇರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ.
ಈ ಹಿಂದೆ ಕುಮಾರಸ್ವಾಮಿ ಸರ್ಕಾರ ಇದ್ದಾಗ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದಾದ ಬಳಿಕ ಯಡಿಯೂರಪ್ಪನವರ ಸರ್ಕಾರ ಬಂದ ಮೇಲೆ ಅವರೂ ಕೂಡ ಅದೇ ಆಶ್ವಾಸನೆ ನೀಡಿದ್ದರಿಂದ
ನಾವು ಯಡಿಯೂರಪ್ಪನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದೆವು. ಅವರು ಕೊಟ್ಟ ಭರವಸೆ ಕೇವಲ ಭರವಸೆಯಾಗಿಯೇ ಉಳಿದಿದೆ.
ಸಾರಿಗೆ ಸಂಸ್ಥೆ ನೌಕರರು ಸಾಕಷ್ಟು ತೊಂದರೆಯಲ್ಲಿದ್ದು, ಕೂಡಲೇ ಸರ್ಕಾರ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಬೇಕು ಎಂದು ಒತ್ತಾಯಿಸಲಾಯಿತು.
Kshetra Samachara
11/12/2020 03:22 pm