ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಿಲ್ಲದ ಸಾರಿಗೆ ನೌಕರರ ಮುಷ್ಕರ : ತಪ್ಪದ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಒಂದು ಬಸ್ ಕೂಡ ರಸ್ತೆಗೆ ಇಳಿದಿಲ್ಲ. ಹೀಗಾಗಿ ಬಸ್ ಗಳಿಲ್ಲದೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.‌

ಇನ್ನು ಅಂತರ ಜಿಲ್ಲಾ ಹಾಗೂ ಗ್ರಾಮೀಣ ಭಾಗದ ಬಸ್ ಸೌಲಭ್ಯ ಸ್ಥಗಿತಗೊಂಡಿದ್ದರಿಂದ ನಿನ್ನೆಯಿಂದಲೂ ನಗರದ ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣಗಳಲ್ಲಿ ಕೆಲ ಪ್ರಯಾಣಿಕರು

ಕಾದು ಕುಳಿತಿದ್ದಾರೆ.

Edited By : Manjunath H D
Kshetra Samachara

Kshetra Samachara

12/12/2020 10:11 am

Cinque Terre

39.43 K

Cinque Terre

0

ಸಂಬಂಧಿತ ಸುದ್ದಿ