ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ನೆನೆಗುದಿಗೆ ಬಿದ್ದಿರುವ ರಸ್ತೆಗಳಿಗೆ ಇನ್ನೂ ಬೇಕಿದೆ, ಕಾಯಕಲ್ಪ

ವರದಿ: ಈರಣ್ಣ ವಾಲಿಕಾರ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಸ್ಮಾರ್ಟ್ ಆಗುತ್ತಿದೆ. ಒಂದು ಕಡೆ ರಸ್ತೆ ಹಾಗೂ ಒಳಚರಂಡಿ ನಿರ್ಮಾಣಕ್ಕೆ ನೂರು ಕೋಟಿ ಖರ್ಚು ಮಾಡಲಾಗುತ್ತಿದೆ.ಮತ್ತೊಂದು ಕಡೆ ದಶಕಗಳಿಂದ ಕೆಲ ರಸ್ತೆಗಳು ಕಾಯಕಲ್ಪ ಕಾಣದೆ ಅವ್ಯವಸ್ಥೆ ಆಗರವಾಗಿವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಬಹುತೇಕ ಮುಗಿಯತ್ತ ಬಂದರೂ ಕೂಡ, ರಸ್ತೆ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.

ಎಲ್ಲೆಂದರಲ್ಲಿ ಗುಂಡಿ ಬಿದ್ದಿರುವ ರಸ್ತೆಗಳು, ಸಂಚಾರಕ್ಕೆ ಭಯ ಹುಟ್ಟಿಸುವ ಭಯಂಕರ ರಸ್ತೆಗಳಿಂದ ಜನ ಜೀವನವೇ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಂಡಿದ್ದವು.

ಈ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿ, ಸಿಆರ್ ಎಫ್ ಅನುದಾನ ಹೊರತು ಪಡಿಸಿ, ನೂರು ಕೋಟಿ ಮೊತ್ತದಲ್ಲಿ ಅವಳಿನಗರದ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಮಹಾನಗರ ಪಾಲಿಕೆ ಮುಂದಾಗಿದೆ.

ಆದ್ರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಂಟೂರು ರೋಡ ಮಾತ್ರ. ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಕಳೆದ ಹಲವು ವರ್ಷಗಳಿಂದ ರಸ್ತೆ ದುರಸ್ತಿಗೆ ಸ್ಥಳಿಯರು ಮಹಾನಗರ ಪಾಲಿಕೆ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಆದ್ರೆ ಇದುವರೆಗೂ ರಸ್ತೆ ನಿರ್ಮಾಣಕ್ಕೆ ಮುಂದಾಗಿಲ್ಲ. ನಿತ್ಯ ನೂರಾರು ವಾಹನಗಳು ಓಡಾಡುತ್ತಿದ್ದು ಧೂಳಿನಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಕ್ಕಳು ಹಾಗೂ ವೃದ್ದರು ಡಸ್ಟ್ ಅಲರ್ಜಿ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ.

ಈಗಾಗಲೇ ಹು-ಧಾ ಅವಳಿನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆದಿದ್ದು, ಸ್ಮಾರ್ಟ್ ಸಿಟಿಯಲ್ಲಿ ಬರದಿರುವ ಪ್ರಮುಖ ರಸ್ತೆಗಳನ್ನು ಹಾಗೂ ನಗರ ಪ್ರದೇಶದ ಚರಂಡಿ ಅಭಿವೃದ್ಧಿ ಕುರಿತು, ಮಹಾನಗರ ಪಾಲಿಕೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕಾರ್ಯಾರಂಭ ಮಾಡಬೇಕಿದೆ......!

Edited By : Manjunath H D
Kshetra Samachara

Kshetra Samachara

12/12/2020 03:44 pm

Cinque Terre

36.84 K

Cinque Terre

7

ಸಂಬಂಧಿತ ಸುದ್ದಿ