ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಮಾತೋಶ್ರೀ ದಿ. ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 11ನೇ ಪುಣ್ಯಸ್ಮರಣೆ ದಿನದ ಅಂಗವಾಗಿ ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಹಾವೀರ ಲಿಂಬ್ ಸೆಂಟರ್ ಇವರ ಸಹಯೋಗದಲ್ಲಿ ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಕೃತಕ ಕಾಲು ಜೋಡಣಾ ಶಿಬಿರದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಸುಮಾರು 15ಕ್ಕೂ ಹೆಚ್ಚು ಚಿಕ್ಕ ಮಕ್ಕಳಿಗೆ ಮತ್ತು ಹಿರಿಯರಿಗೆ ಕೃತಕ ಕಾಲು ಜೋಡಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಕರ್ನಾಟಕ ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಮಹಾವೀರ, ಲಿಂಬ್ ಸೆಂಟರ್ ಅಧ್ಯಕ್ಷ ಮಹೇಂದ್ರ ಸಿಂಘಿ ಉಪಸ್ಥಿತರಿದ್ದರು.
Kshetra Samachara
19/12/2020 05:14 pm