ಧಾರವಾಡ : ತೈಲ, ಅನಿಲ ಬೆಲೆ ಮತ್ತು ದಿನನಿತ್ಯ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ನಗರದ ಜುಬ್ಲಿ ಸರ್ಕಲ್ ನ ಬಸವೇಶ್ವರ ಮೂರ್ತಿ ಮುಂಭಾಗದಲ್ಲಿ
ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಂತೋಷ ನರಗುಂದ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಕಾಸ ಸೊಪ್ಪಿನ, ಶಿವಕಿರಣ ಅಗಡಿ, ಪ್ರತಿಭಾ ದಿವಾಕರ, ಅನಂತಕುಮಾರ ಭಾರತೀಯ, ಪ್ರೋ.ವೀರಣ್ಣ ಮಾಗನೂರ, ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
Kshetra Samachara
23/12/2020 03:07 pm