ಹುಬ್ಬಳ್ಳಿ - ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ಇತರೆ ನಗರಗಳಲ್ಲಿ ವಾಸಿಸುವ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ವಿಧ್ಯಾಭ್ಯಾಸ ಮಾಡುತ್ತಿರುವ ಅವರ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗವುದು.
ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಪಾಸುಗಳನ್ನು ನೀಡಲು ಹುಬ್ಬಳ್ಳಿಯ ನೀಲಿಜನ್ ರಸ್ತೆಯ ಶ್ರೀನಾಥ ಕಾಂಪ್ಲೇಕ್ಸ್, 3 ನೇ ಮಹಡಿಯಲ್ಲಿರುವ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ನೊಂದಾಯಿತ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
23/12/2020 06:32 pm