ಧಾರವಾಡ: ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ಮಂಥನ ಆವರಣದಲ್ಲಿ ನೀರು ಬಳಕೆದಾರರ ಸಹಕಾರಿ ಸಂಘಗಳ ಪುನಃಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು.
ಕರ್ನಾಟಕ ಸರ್ಕಾರದ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಎ.ಬಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.
ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಶಶಿಮೌಳಿ ಕುಲಕರ್ಣಿ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಕಾಡಾ ಆಡಳಿತಾಧಿಕಾರಿ ಡಾ.ಸಿ.ಬಿ. ಬಾಲರೆಡ್ಡಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನೀರು ಬಳಕೆದಾರರ ಸಹಕಾರಿ ಸಂಘಗಳ ಸದಸ್ಯ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
24/12/2020 05:01 pm