ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: PublicNext-ವರದಿಯಿಂದ ರಸ್ತೆ ಬದಿ ವ್ಯಾಪಾರಸ್ಥರಿಗೆ ಹೈಟೆಕ್ ಸಂತೆ ಭಾಗ್ಯ !

ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್- ಈರಣ್ಣ ವಾಲಿಕಾರ

ಹುಬ್ಬಳ್ಳಿ: ಇದು ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್. ವರದಿ ಮಾಡಿ ಕೆಲವೇ ದಿನಗಳಲ್ಲಿ ವ್ಯಾಪಾರಸ್ಥರಿಗೆ ಸಂತೆ ಹಚ್ಚಲು ಹೈಟೆಕ್ ಮಾರುಕಟ್ಟೆಯಲ್ಲಿ ವ್ಯವಸ್ಥೆ ಮಾಡಿಕೊಟ್ಟ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು....

ಹೌದು, ಸ್ಮಾರ್ಟ್ ಸಿಟಿ ಅಡಿಯಲ್ಲಿ ನಗರದ ಬೆಂಗೇರಿಯಲ್ಲಿ ನೂತನವಾಗಿ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಾಣ ಮಾಡಿತ್ತು. ಈ ಮಾರುಕಟ್ಟೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಲೋಕಾರ್ಪಣೆ ಕೂಡ ಮಾಡಿದ್ದರು. ಆದರೆ ತರಕಾರಿ ವ್ಯಾಪಾರಸ್ಥರಿಗೆ ಜಾಗವನ್ನು ಹಂಚಿಕೆ ಮಾಡದಿರುವುದರಿಂದ ವ್ಯಾಪಾರಸ್ಥರು ಮತ್ತೆ ರಸ್ತೆಯ ಬದಿಯಲ್ಲೇ ಮಾರಾಟ ಮಾಡುತ್ತಿದ್ದರು.

ಇದನ್ನು ನಿಮ್ಮ ಪಬ್ಲಿಕ್ ನೆಕ್ಸ್ಟ್ "ಹೈಟೆಕ್ ಮಾರುಕಟ್ಟೆ ಲೋಕಾರ್ಪಣೆಯಾದರೂ ಕೂಡ ರಸ್ತೆಯಲ್ಲಿಯೇ ಸಂತೆ ಹಚ್ಚಿದ ವ್ಯಾಪಾರಸ್ಥರು" ಎಂಬ ಶೀರ್ಷಿಕೆಯಲ್ಲಿ ಸುದ್ದಿಯನ್ನು ಬಿತ್ತರಿಸಿತ್ತು. ಸುದ್ದಿ ನೋಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು ವ್ಯಾಪಾರಸ್ಥರಿಗೆ ಸಂತೆ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದ ವ್ಯಾಪಾರಸ್ಥರು ಪಬ್ಲಿಕ್ ನೆಕ್ಸ್ಟ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಬೆಂಗೇರಿಯಲ್ಲಿ ನಿರ್ಮಾಣವಾದ ಹೈಟೆಕ್ ಮಾರುಕಟ್ಟೆಯನ್ನು ಬಳಸಿಕೊಂಡು ವ್ಯಾಪಾರಸ್ಥರು ಸಂತೆ ಹಚ್ಚಿ. ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕಾಗಿದೆ.

ಈರಣ್ಣ ವಾಲಿಕಾರ

ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/05/2022 06:35 pm

Cinque Terre

138.32 K

Cinque Terre

8

ಸಂಬಂಧಿತ ಸುದ್ದಿ