ಧಾರವಾಡ: ಕೇಂದ್ರ ಸರ್ಕಾರದ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಸೌಲಭ್ಯ ಪಡೆದ ಧಾರವಾಡದ ಬೀದಿ ಬದಿ ವ್ಯಾಪಾರಸ್ಥರಿಗೆ ಒಂದೇ ಸೂರಿನಡಿ ಕೇಂದ್ರಾಧಾರಿತ ವಿವಿಧ ಸೌಲಭ್ಯಗಳು ದೊರೆಯಬೇಕು ಎಂಬ ಉದ್ದೇಶದಿಂದ ಧಾರವಾಡದ ಕಲಾಭವನದಲ್ಲಿ ಇಂದು ಸ್ವನಿಧಿಯಿಂದ ಸಮೃದ್ಧಿ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಾಕಡೌನ್ ಅವಧಿಯಲ್ಲಿ ಬೀದಿ ಬದಿ ವ್ಯಾಪರಸ್ಥರಿಗೆ ಅನುಕೂಲ ಆಗಲಿ ಎಂದು ಪಿಎಂ ಸ್ವನಿಧಿ ಯೋಜನೆಯಡಿ 10 ಸಾವಿರದವರೆಗೆ ಕಿರು ಸಾಲ ಸೌಲಭ್ಯ ಕಲ್ಪಿಸಲಾಗಿತ್ತು. ಇಂದು ಸಾಲ ಸೌಲಭ್ಯ ಪಡೆದ ಫಲಾನುಭವಿಗಳಿಗಾಗಿಯೇ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ಕಾರ್ಮಿಕ ಇಲಾಖೆಯಡಿ ಇರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೇ ಆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಫಲಾನುಭವಿಗಳಿಂದ ಅರ್ಜಿ ಕೂಡ ಇದೇ ಸಂದರ್ಭದಲ್ಲಿ ಪಡೆದುಕೊಳ್ಳಲಾಯಿತು.
ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಸಾರ್ವಜನಿಕರಿಗೆ ಅದರಲ್ಲೂ ಬೀದಿ ಬದಿಯ ವ್ಯಾಪಾರಸ್ಥರಿಗೆ ಹಾಗೂ ಬಡವರಿಗೆ ದೊರಕಬೇಕು ಎಂಬ ಉದ್ದೇಶದಿಂದ ಪ್ರತಿ ತಿಂಗಳು ಪಿಎಂ ಸ್ವನಿಧಿ ಯೋಜನೆಯಡಿ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಜಿಲ್ಲಾ ಅಧಿಕಾರಿ ಡಾ.ಚಂದ್ರಪ್ಪ, ನಲ್ಮ ಯೋಜನೆಯ ಮಿಷನ್ ಮ್ಯಾನೇಜರ್ ಡಾ.ರವಿ ಮುನವಳ್ಳಿ, ಅಬ್ದುಲ್ ರಜಾಕ್ ಗಡವಾಲೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Kshetra Samachara
10/02/2021 09:19 pm