ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಸ್ತೆ ತಡೆದು ವ್ಯಾಪಾರಸ್ಥರಿಂದ ಪ್ರತಿಭಟನೆ- ಕೊನೆಗೂ ಸ್ಥಳಕ್ಕೆ ಬಂದ ಅಧಿಕಾರಿಗಳು

ಹುಬ್ಬಳ್ಳಿ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮೂರುಸಾವಿರಮಠದ ಬಳಿ ಇರುವ ಅಂಚಟಗೇರಿ ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ವಿಳಂಬ ಮಾಡಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.

ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ 45 ದಿನಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ನೋಡದೆ ನಿರ್ಲಕ್ಷ್ಯ ಧೋರಣೆ ವಹಿಸಿದ್ದು ಸರಿಯಲ್ಲ. ಶೀಘ್ರವೇ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ರಸ್ತೆ ತಡೆ ನಡೆಸಿದ್ದರಿಂದ ಕೆಲ ಕಾಲ ಬೈಕ್, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಇದನ್ನು ಕಂಡ ಪೊಲೀಸರು, 'ರಸ್ತೆ ತಡೆಯುವ ಅಧಿಕಾರ ನಿಮಗಿಲ್ಲ. ರಸ್ತೆ ತಡೆ ಬೀಡಿ' ಎಂದು ಪ್ರತಿಭಟನಾಕಾರರ ವಿರುದ್ಧ ಅಸಮಾಧಾನ ಹೊರ ಹಾಕಿದರು. ಇದರಿಂದಾಗಿ ವ್ಯಾಪಾರಸ್ಥರು ಹಾಗೂ ಪೊಲೀಸರ ನಡುವೆ ಕೆಲ ಹೊತ್ತು ವಾಗ್ವಾದ ನಡೆಯಿತು.

ಸ್ಥಳಕ್ಕೆ ದೌಡಾಯಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರನ್ನು ಮನವೊಲಿಸುವ ಮೂಲಕ ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

Edited By : Manjunath H D
Kshetra Samachara

Kshetra Samachara

22/02/2022 02:59 pm

Cinque Terre

39.49 K

Cinque Terre

3

ಸಂಬಂಧಿತ ಸುದ್ದಿ