ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಒಂದು ನಿಲ್ದಾಣ ಒಂದು ಉತ್ಪನ್ನ: ದೇಶಿಯ ಸೊಗಡು ಬಿಂಬಿಸುವ ನೈಋತ್ಯ ರೈಲ್ವೆ ವಲಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಮೂಲಕ ಸಾಕಷ್ಟು ಹೆಸರು ಮಾಡಿರುವ ನೈಋತ್ಯ ರೈಲ್ವೆ ವಲಯ ಈಗ ಸ್ಥಳೀಯ ಕುಶಲಕರ್ಮಿಗಳು, ಅವರ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆಯನ್ನು ರೈಲ್ವೆ ನಿಲ್ದಾಣದಲ್ಲಿ ಪರಿಚಯಿಸಲಾಗಿದೆ.

ಹೌದು.. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಅಡಿ ಗದಗ-ಬೆಟಗೇರಿ ಹಾಗೂ ಇಳಕಲ್‌ ಸೀರೆಗಳ ಮಳಿಗೆಗೆ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಳಖೇಡ ಚಾಲನೆ ನೀಡಿದರು. ರೈಲ್ವೆ ನಿಲ್ದಾಣದಲ್ಲಿ ಮಳಿಗೆ ಪ್ರಾರಂಭಿಸಿರುವುದರಿಂದ ವಿವಿಧೆಡೆ ಪ್ರಯಾಣಿಸುವವರಿಗೆ ಮತ್ತೊಂದು ಭಾಗದ ಸಂಸ್ಕೃತಿ, ಕಲೆಯ ಪರಿಚಯವಾಗುತ್ತದೆ.

ಇನ್ನೂ ಈ ಯೋಜನೆಯನ್ನು ಹುಬ್ಬಳ್ಳಿ ವಿಭಾಗದ 15 ರೈಲು ನಿಲ್ದಾಣಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದ್ದು, ಆಸಕ್ತರು ಹುಬ್ಬಳ್ಳಿಯ ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರ ಕಾರ್ಯಾಲಯದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

26/04/2022 10:25 pm

Cinque Terre

20.31 K

Cinque Terre

0

ಸಂಬಂಧಿತ ಸುದ್ದಿ