ಹುಬ್ಬಳ್ಳಿ: ಸುಮಾರು ವರ್ಷಗಳಿಂದ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಾ ಬಂದಿರುವ ವ್ಯಾಪಾರಸ್ಥರಿಗೆ, ಸ್ಮಾರ್ಟ್ ಸಿಟಿ ಅಡಿಯಲ್ಲಿ ತಯಾರಾದ ಜನತಾ ಬಜಾರ್ ಕಟ್ಟಡದಲ್ಲಿ ಸ್ಥಳಾವಕಾಶ ನೀಡಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ, ಎಲ್ಲ ವ್ಯಾಪಾರಸ್ಥರು ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರಸ್ಥರು ಸೇರಿಕೊಂಡು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ, ನಮಗೂ ವ್ಯಾಪಾರ ಮಾಡುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
Kshetra Samachara
08/08/2022 12:14 pm