ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಿರಂತರ ವರ್ಷಧಾರೆ; ಗಗನಮುಖಿ ತರಕಾರಿ ದರ, ಗ್ರಾಹಕ ಬೇಸರ

ಹುಬ್ಬಳ್ಳಿ: 2-3 ದಿನಗಳಿಂದ ಹವಾಮಾನ ವೈಪರೀತ್ಯದಿಂದಾಗಿ ಸತತ ಮಳೆಯಾಗುತ್ತಿದೆ. ಮಳೆ- ಶೀತಗಾಳಿ ಪ್ರಮಾಣ ಹೆಚ್ಚಾದ ಪರಿಣಾಮ ಮಾರುಕಟ್ಟೆಗೆ ತರಕಾರಿ ಕೊರತೆಯಾಗಿರುವ ಕಾರಣ ಬೆಲೆ ಗಗನಕ್ಕೇರಿ ಗ್ರಾಹಕರು ಕಂಗಾಲಾಗಿದ್ದಾರೆ.

ಹೌದು...ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ತರಕಾರಿ ಸರಬರಾಜು ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಬೆಳೆದಿದ್ದ ತರಕಾರಿ ಅತಿ ಹೆಚ್ಚು ತೇವಾಂಶ ಹಾಗೂ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹೊಲ, ತೋಟದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಬೇರೆ ಬೇರೆ ಜಿಲ್ಲೆಗಳಿಂದ ಸಹ ತರಕಾರಿ ಸರಿಯಾಗಿ ಸರಬರಾಜು ಆಗದೆ ಬೆಲೆ ಏರಿಕೆಯಾಗಿದೆ. ಕೆಲವೆಡೆ ಬೆಳೆಗೆ ನಾನಾ ರೋಗ ತಗುಲಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹೊಸದಾಗಿ ತರಕಾರಿ ಬೆಳೆ ನಾಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮಾರುಕಟ್ಟೆಗೆ ಅಗತ್ಯವಾದಷ್ಟು ತರಕಾರಿ ಸರಬರಾಜು ಆಗುತ್ತಿಲ್ಲ. ಇದರಿಂದ ತರಕಾರಿ ಬೆಲೆ ಏರಿಕೆಯಾಗಿದೆ. ಆದರೆ, ಇದರಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಿಲ್ಲ.

Edited By : Nagesh Gaonkar
Kshetra Samachara

Kshetra Samachara

14/09/2022 06:41 pm

Cinque Terre

26.58 K

Cinque Terre

0

ಸಂಬಂಧಿತ ಸುದ್ದಿ