ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು, ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ ಹಾಗೂ ಕರ್ನಾಟಕ ಭೀಮ ಸೇನೆ ಸಮಿತಿ ವತಿಯಿಂದ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮೂಲಕ ರೈತರನ್ನು ಅಧೋಗತಿಗೆ ತಳ್ಳುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ನೀಡುವುದು, ವಸತಿ ಯೋಜನೆಗಾಗಿ ಗ್ರಾಮ ಪಂಚಾಯತ ನೌಕರರ ಅನುಮೋದನೆ, ಬಾಕಿ ವೇತನ ಪಾವತಿ, ಬಿಸಿಯೂಟ ನೌಕರರಿಗೆ ಕೂಡಲೇ ವೇತನ ನೀಡುವುದು, ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಕುಡಿಯುವ ನೀರು, ಶಿಕ್ಷಣ, ವಿದ್ಯುತ್, ರೈಲು, ದೂರಸಂಪರ್ಕ, ಬ್ಯಾಂಕ, ವಿಮೆ ಮುಂತಾದ ಸಾರ್ವಜನಿಕ ವಲಯದ ಖಾಸಗೀಕರಣ ಮಾಡುತ್ತಿರುವುದನ್ನು ಕೈಬಿಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
24/09/2020 03:36 pm