ಧಾರವಾಡ : ಅಕ್ಟೋಬರ್ 2 ಗಾಂಧೀ ಜಯಂತಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಸೇವಾ ಪ್ರಕ್ಷೇತ್ರ ಕಾರ್ಯಕ್ರಮದ ಅಡಿಯಲ್ಲಿ ಹತ್ತಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿಂದ ನೀರಿನ ಘಟಕವನ್ನು ಶುದ್ಧಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರಿರುವ ಕುಡಿಯುವ ನೀರಿನ ಟ್ಯಾಂಕ್ ಹಾಗೂ ಮಹಾತ್ಮಾ ಗಾಂಧೀ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಬಣ್ಣ ಬಳಿಯುವ ಮೂಲಕ ಮೆರಗು ತಂದರು. ಇಲ್ಲಿಗೆ ದಿನನಿತ್ಯ ಬರುವ ಸಾವಿರಾರು ಜನರಿಗೆ ತೊಂದರೆ ಆಗಬಾರದು ಎಂಬ ಉದ್ದೇಶ ಈಗ ಸಾರ್ವಜನಿಕರಿಗೆ ಅನುಕೂಲವಾಗಿದೆ.
Kshetra Samachara
02/10/2022 08:16 am