ಧಾರವಾಡ: ಧಾರವಾಡ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯ್ತಿ ನೌಕರರ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಸದಸ್ಯರು ಬುಧವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನೌಕರರು ತಮ್ಮ ಬೇಡಿಕೆಗಳ ಇತ್ಯರ್ಥಕ್ಕಾಗಿ ಸೆ.18 ರಂದು ಜಿಪಂ ಸಿಇಓ ಅವರಿಗೆ ಮನವಿ ಸಲ್ಲಿಸಲು ಹೋಗಿದ್ದ ವೇಳೆ ಸಿಇಓ ಅವರು, ನೌಕರರ ಬೇಡಿಕೆಗಳನ್ನು ನಾನು ಈಡೇರಿಸುತ್ತೇನೆ. ಸಂಘಟನೆಯ ಅವಶ್ಯಕತೆ ಇಲ್ಲ ಎಂದು ಮನವಿ ಸ್ವೀಕರಿಸದೇ ಹೊರಟು ಹೋಗಿದ್ದಾರೆ. ಅಧಿಕಾರಿಗಳು ಸೌಜನ್ಯಕ್ಕೂ ನೌಕರರ ಸಮಸ್ಯೆಗಳನ್ನು ಕೇಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗ್ರಾಪಂನ ಎಲ್ಲಾ ನಿವೃತ್ತ ನೌಕರರಿಗೆ ಸರ್ಕಾರದ ಆದೇಶದಂತೆ 15 ತಿಂಗಳ ಗ್ರಾಚ್ಯುಟಿ ನೀಡಬೇಕು, ಇಎಫ್ ಎಂಎಸ್ ಬಾಕಿ ಉಳಿದ ಕಸ ಗೂಡಿಸುವ ಮತ್ತು ಪಂಪ್ ಆಪರೇಟರ್ ಗಳನ್ನು ಸರ್ಕಾರದ ಆದೇಶದಂತೆ ತಂತ್ರಾಂಶದಲ್ಲಿ ಸೇರ್ಪಡೆ ಮಾಡಬೇಕು ಹಾಗೂ ಹುದ್ದೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
Kshetra Samachara
23/09/2020 03:40 pm