ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜಮೀನನ್ನು ಕೊಳ್ಳೆ ಹೊಡೆಯುವ ಕೆಲಸ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧಾರವಾಡದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಪುಷ್ಪಾ ಹಿರೇಮಠ ಆರೋಪಿಸಿ ಬೊಬ್ಬೆ ಹೊಡೆದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲು ಬಂದಿದ್ದ ಪುಷ್ಪಾ ಹಿರೇಮಠ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಅನೇಕ ಕಾಯ್ದೆಗಳನ್ನು ತಂದು ರೈತ ಕುಲದ ಮರಣಶಾಸನ ಬರೆಯಲು ಹೊರಟಿವೆ ಎಂದು ಆರೋಪಿಸಿದರು.
Kshetra Samachara
28/09/2020 04:15 pm