ಧಾರವಾಡ: 1995ರ ನಂತರ ಆರಂಭವಾದ ಕನ್ನಡ ಶಾಲಾ, ಕಾಲೇಜುಗಳಿಗೆ ಅನುದಾನ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಸದಸ್ಯರು ಶನಿವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡಿಸುವುದು, ಎನ್ ಪಿಎಸ್ ರದ್ಧತಿ ಮಾಡುವುದು, ಕಾಲ್ಪನಿಕ ವೇತನ ಬಡ್ತಿಗಾಗಿ ಬಸವರಾಜ ಹೊರಟ್ಟಿ ವರದಿ ಜಾರಿ ಮಾಡಬೇಕು, ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಸಿಬ್ಬಂದಿಗಳಿಗೂ ವಿಸ್ತರಿಸುವುದು, ಖಾಲಿ ಹುದ್ದೆಗಳ ಭರ್ತಿಗೆ ವಿಧಿಸಿದ ಆರ್ಥಿಕ ಮಿತವ್ಯಯ ಹಿಂಪಡೆಯುವುದು, ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಂತೆ, ನಮ್ಮ ರಾಜ್ಯದಲ್ಲಿಯೂ ಕೂಡ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಲಾಯಿತು.
Kshetra Samachara
19/09/2020 05:22 pm