ಧಾರವಾಡ: ಲಿಂಗಾಯತ ಸಮುದಾಯಕ್ಕೆ ಈ ಮೊದಲು ಲಿಂಗಾಯತ ಎಂಬ ಹೆಸರಿನಡಿ ಜಾತಿ ಪ್ರಮಾಣಪತ್ರ ನೀಡಲಾಗುತ್ತಿತ್ತು. ಆದರೆ, 2002ರಲ್ಲಿ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ವೀರಶೈವ ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡಲಾಗುತ್ತಿದೆ. ಇದು ಸರಿಯಲ್ಲ. ಮೊದಲಿನಂತೆಯೇ ಕೇವಲ ಲಿಂಗಾಯತ ಎಂಬ ಹೆಸರಿನಡಿ ಜಾತಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರು ಶನಿವಾರ ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವೀರಶೈವ ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಿ ಅನ್ಯಾಯ ಮಾಡಲಾಗುತ್ತಿದೆ. ಲಿಂಗಾಯತರಾದ ನಮಗೆ ಇದು ಮುಜುಗರವನ್ನುಂಟು ಮಾಡುತ್ತಿದೆ. ಆದ್ದರಿಂದ ವೀರಶೈವ ಲಿಂಗಾಯತ ಎನ್ನುವ ಬದಲು ಕೇವಲ ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿದರು.
Kshetra Samachara
19/09/2020 05:00 pm