ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಲ್ ಕೆಜಿ, ಯುಕೆಜಿ ಅಂಗನವಾಡಿಯಲ್ಲೇ ಪ್ರಾರಂಭಿಸುವಂತೆ ಒತ್ತಾಯ

ಧಾರವಾಡ: ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ನಡೆಸುವ ಬದಲು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೋಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಶಿಕ್ಷಣ 2016 ಹಾಗೂ ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿ ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆಗೊಳಿಸುವ ಪ್ರಸ್ತಾಪವಿರುವುದು ಸ್ವಾಗತಾರ್ಹ. ಹೀಗಿದ್ದೂ ರಾಜ್ಯ ಸರ್ಕಾರವು ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆ ನಡೆಸುತ್ತಿರುವುದು ವಿಷಾದನೀಯ. ಈಗಾಗಲೇ ಪ್ರಾಯೋಗಿಕವಾಗಿ ಆರಂಭವಾಗಿರುವ ಕಡೆ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ಪರ್ಯಾವಾಗಿ ಐ.ಸಿ.ಡಿ.ಎಸ್ . ಉಳಿಸಲು ಎಲ್.ಕೆ.ಜಿ. ಯು.ಕೆ.ಜಿ .ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ, ಎಲ್ ಕೆಜಿ ಹಾಗೂ ಯುಕೆಜಿ ಕ್ಲಾಸುಗಳನ್ನು ಅಂಗನವಾಡಿ ಕೇಂದ್ರಗಳಲ್ಲೇ ತೆರೆಯಬೇಕು, ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ಒದಗಿಸಬೇಕು, ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ( ಟಿಸಿ ) ನೀಡುವಂತೆ ಆದೇಶಿಸಬೇಕು ಎಂದು ಪ್ರತಿಭಟನಾನಿರತ ಕಾರ್ಯಕರ್ತೆಯರು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

21/09/2020 12:53 pm

Cinque Terre

14.39 K

Cinque Terre

0

ಸಂಬಂಧಿತ ಸುದ್ದಿ