ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಮ್ಮ ಬೇಡಿಕೆ ಈಡೇರಸ್ರಿ.. ಇಲ್ಲಾಂದ್ರ ಮುತ್ತಿಗೆ ಹಾಕ್ತೇವಿ ನೋಡ್ರಿ..

ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು ಈವರೆಗೂ ಸ್ಪಂದಿಸಿಲ್ಲ. ನಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಪಾವತಿ ಈವರೆಗೂ ಅನುಷ್ಠಾನಗೊಂಡಿಲ್ಲ. ಕೊರೊನಾ ಸಂದರ್ಭದಲ್ಲಿ ತಮ್ಮ ಜೀವನ ಮುಡಿಪಿಟ್ಟು ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕರು ಹಾಗೂ ವಾಹನ ಚಾಲಕರಿಗೆ ಸುರಕ್ಷಾ ಸಾಧನಗಳನ್ನು ನೀಡಿಲ್ಲ, ಪೌರ ಕಾರ್ಮಿಕರಿಗೆ ಬರಬೇಕಾದ 12 ಕೋಟಿ 21 ಲಕ್ಷದ 70 ಸಾವಿರ ಹಣವನ್ನು ಮಹಾನಗರ ಪಾಲಿಕೆ ಪಾವತಿಸಿಲ್ಲ, ಆಟೊ, ಟಿಪ್ಪರ್ ವಾಹನ ಚಾಲಕರ ಮೂರು ತಿಂಗಳ ವೇತನ ನೀಡಿಲ್ಲ ಈ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳು ಸ್ಪಂದಿಸದೇ ಇದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದರು.

Edited By : Nagesh Gaonkar
Kshetra Samachara

Kshetra Samachara

26/09/2020 03:41 pm

Cinque Terre

14.73 K

Cinque Terre

0

ಸಂಬಂಧಿತ ಸುದ್ದಿ