ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಸರ್ಕಾರ ಉತ್ತರಿಸಲಿ

ಧಾರವಾಡ: ಉತ್ತರಪ್ರದೇಶದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯ ನಾಲಿಗೆಯನ್ನು ಕಟ್ ಮಾಡಿ ಕಾಮುಕರು ಪೈಶಾಚಿಕ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರ ಉತ್ತರಿಸಬೇಕು ಹಾಗೂ ಅಶ್ಲೀಲ ಸಿನಿಮಾ ಸಾಹಿತ್ಯವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಓ, ಎಐ ಡಿವೈಓ ಹಾಗೂ ಎಐಎಮ್ ಎಸ್ಎಸ್ ಸಂಘಟನೆಗಳ ಕಾರ್ಯಕರ್ತರು ಬುಧವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯಗಳು ನಡೆಯುತ್ತಲೇ ಇವೆ. ಆದರೆ, ಸರ್ಕಾರಗಳು ಕಣ್ಮುಚ್ಚಿ ಕುಳಿತಿವೆ. ಸರ್ಕಾರ ಇದಕ್ಕೆ ಉತ್ತರಿಸಬೇಕು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಸರ್ಕಾರಗಳು ಏನು ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಉತ್ತರಿಸಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

30/09/2020 12:59 pm

Cinque Terre

14.89 K

Cinque Terre

1

ಸಂಬಂಧಿತ ಸುದ್ದಿ