ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 'ಅತಿಥಿ'ಗಳನ್ನು ಕೆಲಸದಿಂದ ತಗೀಬ್ಯಾಡ್ರಪ್ಪೋ

ಧಾರವಾಡ: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ, ಯಾವುದೇ ಕಾರಣಕ್ಕೂ ಅವರನ್ನು ಸೇವೆಯಿಂದ ಕೈಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಸದಸ್ಯರು ಬುಧವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14.564 ಅತಿಥಿ ಉಪನ್ಯಾಸಕರು ದುಡಿಯುತ್ತಿದ್ದಾರೆ. ಕೆಲವರು 20-25 ವರ್ಷಗಳಿಂದ ನಿರಂತರವಾಗಿ ಅತಿಥಿಗಳಾಗಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕೆಲಸಕ್ಕೆ ಭದ್ರತೆ ಇಲ್ಲವಾಗಿದೆ. ಲಾಕ್‌ಡೌನ್ ಸಮಯದಲ್ಲಿ ತಮ್ಮ ಕೈಯಿಂದಲೇ ಖರ್ಚನ್ನು ಭರಿಸಿ ಆನ್‌ಲೈನ್ ತರಗತಿಗಳನ್ನೂ ಕೂಡ ಅವರು ನಡೆಸಿದ್ದಾರೆ. 2019 ರ ಜನೆವರಿಯಲ್ಲಿ ಯುಜಿಸಿ ಸುತ್ತೋಲೆಯು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಬೋಧನಾ ಅವಧಿಗೆ 1,500 ಅಥವಾ ಮಾಸಿಕ 50,000ದವರೆಗೆ ವೇತನವನ್ನು ನಿಗದಿ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಆದರೆ , ಇಂದಿಗೂ ನಮ್ಮ ರಾಜ್ಯದಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನೆಟ್, ಸೆಟ್ ಅಥವಾ ಪಿ.ಎಚ್ ಡಿ ಆಗಿರುವವರಿಗೆ ಮಾಸಿಕ 13,001, ಉಳಿದವರಿಗೆ 11,000 ನೀಡಲಾಗುತ್ತಿದೆ. ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಿಂದ ಬದುಕು ಸಾಗಿಸಲು ಹೆಣಗುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು. ಬಾಕಿ ಇರುವ ವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕು. ಲಾಕ್‌ಡೌನ್ ಅವಧಿಯನ್ನು ಕೆಲಸದ ಅವಧಿಯೆಂದು ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

23/09/2020 01:15 pm

Cinque Terre

25.73 K

Cinque Terre

0

ಸಂಬಂಧಿತ ಸುದ್ದಿ