ಧಾರವಾಡ: ಜಿವಿಆರ್ ಎಂಪಿ ಪ್ರೈವೆಟ್ ಲಿಮಿಟೆಡ್ ಕಂಪೆನಿಯು ಧಾರವಾಡದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸುವ ಟೆಂಡರ್ ಪಡೆದಿದ್ದು, ಈ ಕಂಪೆನಿಯವರು ರಸ್ತೆ ಕಾಮಗಾರಿ ಪೂರ್ಣ ಮಾಡದೇ, ಕಳೆದ 8 ವರ್ಷಗಳಿಂದ ಶುಲ್ಕ ವಸೂಲಾತಿ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಸಂತೋಷ ಕರೆಣ್ಣವರ ಆರೋಪಿಸಿದ್ದಾರೆ.
ಈ ಸಂಬಂಧ ಟೋಲಗೇಟ್ ಬಳಿಯೇ ವೀಡಿಯೋ ಸಂದೇಶ ನೀಡಿರುವ ಅವರು, ಧಾರವಾಡ -ಹುಬ್ಬಳ್ಳಿ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಯನ್ನು ಜನಪ್ರತಿನಿಧಿಗಳು ಪರಿಹಾರ ಮಾಡುವ ಬದಲು ಖಾಸಗಿ ಕಂಪೆನಿಗಳನ್ನು ರಕ್ಷಿಸುತ್ತಿರುವುದು ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯಲು ಕಾರಣವಾಗಿದೆ ಎಂದು ಹರಿಹಾಯ್ದಿದ್ದಾರೆ.
ಕೂಡಲೇ ಸರ್ಕಾರ ಸಮರ್ಪಕವಾಗಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಇಲ್ಲದೇ ಇದ್ದರೆ ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ವ್ಯಾಪಕ ಚಳುವಳಿ ನಡೆಸುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಲೋಕೋಪಯೋಗಿ ಸಚಿವರಿಗೂ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Kshetra Samachara
19/09/2020 08:31 pm