ಹುಬ್ಬಳ್ಳಿ: ವಿದ್ಯಾನಗರದ ಮಹಿಳಾ ಪಾಲಿಟೆಕ್ನಿಕ್ ಆವರಣದಲ್ಲಿ ಎನ್.ಎಲ್.ಸಿ ಕಂಪನಿ ಸಿಎಸ್ಆರ್ ಯೋಜನೆಯಡಿ Smart Class ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಉದ್ಘಾಟಿಸುವರು.
ಬಳಿಕ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು,ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡುವ ಹಾಗೂ ಸಾಮಾಜಿಕ ಜವಾಬ್ದಾರಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಟ್ಟಡ ಹಾಗೂ ಸಾರ್ಟ್ ಕ್ಲಾಸ್ ನಿರ್ಮಾಣಕ್ಕೆ ಮುಂದಾಗಿದ್ದು,ಧಾರವಾಡ ಜಿಲ್ಲೆಯಲ್ಲಿ ಮೂರು ಸ್ಮಾರ್ಟ್ ಕ್ಲಾಸ್ ಕೊಟ್ಟಿದ್ದೆ.ಅದರ ಉದ್ಘಾಟನೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಗಿದೆ ಎಂದರು.
ಇನ್ನೂ ಹು-ಧಾ ಮಹಾನಗರದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಸ್ಥಗಿತಗೊಂಡ ಕುರಿತು ಪಬ್ಲಿಕ್ ನೆಕ್ಸ್ಟ್ ಪ್ರಶ್ನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಈ ಕುರಿತು ನಾನು ಹಾಗೂ ಜಗದೀಶ ಶೆಟ್ಟರ್ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ ಎಂದರು.
Kshetra Samachara
31/10/2020 02:16 pm