ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಡು ರಸ್ತೆಯಲ್ಲಿ ವಿದ್ಯಾರ್ಥಿಗಳು ಟೈರ್ ಗೆ ಬೆಂಕಿ ಹಚ್ಚಿದ್ದ್ಯಾಕೆ ಗೊತ್ತಾ?

ಧಾರವಾಡ: ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಹಾಗೂ ತಕ್ಷಣ ಕೋರ್ಸ್ ಆರಂಭಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡದ ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಎದುರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಕಾನೂನು ಪದವಿ ಬಂದ್ ಮಾಡಿದ್ದನ್ನು ಖಂಡಿಸಿ, ಈಗಾಗಲೇ ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನಾಲ್ಕು ಬಾರಿ ಮನವಿ ಸಲ್ಲಿಸಿದರೂ, ಕೋರ್ಸ್ ಆರಂಭಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಸಂಘಟನೆ ಮನವಿಗೂ ಸ್ಪಂದಿಸಿಲ್ಲ ಎಂದು ದೂರಿದರು.

ತಕ್ಷಣವೇ ಎಚ್ಚೆತ್ತುಕೊಂಡು ಕವಿವಿ, ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

03/11/2020 03:32 pm

Cinque Terre

18.86 K

Cinque Terre

0

ಸಂಬಂಧಿತ ಸುದ್ದಿ