ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಸಿಡಿಸಿ,ಹೊರಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆ,ಕನಿಷ್ಟ ವೇತನಕ್ಕೆ ಆಗ್ರಹ

ಧಾರವಾಡ : ರಾಜ್ಯದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ತಾತ್ಕಾಲಿಕ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಿಡಿಸಿ (ಕಾಲೇಜು ಅಭಿವೃದ್ಧಿ ಸಮಿತಿ) ಹೆಸರಿನಲ್ಲಿ ಕೆಲಸ ಮಾಡುತ್ತಿರುವ `ಡಿ’ ಗ್ರೂಪ್ ಹಾಗೂ ಡೇಟಾ ಎಂಟ್ರಿ ಆಪರೇಟರಳಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರರಿಗೆ ಕನಿಷ್ಟ ವೇತನ ಹಾಗೂ ಹಾಗೂ ಅವರ ಸೇವೆಯನ್ನು ಮುಂದುವರೆಸಲು ಆಗ್ರಹಿಸಿ ಎಐಯುಟಿಯುಸಿ ವಿಭಾಗೀಯ ಮಟ್ಟದ ಪ್ರತಿಭಟನೆ ನಡೆಸಿದರು.

ಇಂದು ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಕಾಲೇಜುಗಳ ಕಾರ್ಮಿಕರ ಸಂಘದ ವತಿಯಿಂದ ನಗರದ ಮಿನಿ ವಿಧಾನಸೌಧ ಬಳಿಯಿರುವ ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರಿ ಕಾಲೇಜುಗಳ ಸಿಡಿಸಿ,ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿಗಳಿಗೆ ಉದ್ಯೋಗ ಭದ್ರತೆ ಹಾಗೂ ಸೂಕ್ತ ವೇತನ ನೀಡುವಂತೆ ಆಗ್ರಹಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ಹೊಸಮನಿ, ನಿಂಗಮ್ಮ ಹುಡೇದ್, ಶಿವಾನಂದ ಬರಬರೇ, ಮಲ್ಲಿಕಾರ್ಜುನ ಮುಳ್ಳವಾಡ ಸೇರಿದಂತೆ ಕಾರ್ಮಿಕರು ಇದ್ದರು.

Edited By : Manjunath H D
Kshetra Samachara

Kshetra Samachara

05/11/2020 05:13 pm

Cinque Terre

21.57 K

Cinque Terre

0

ಸಂಬಂಧಿತ ಸುದ್ದಿ