ಕಲಘಟಗಿ:ಪಟ್ಟಣದ ಬಸ್ ನಿಲ್ದಾಣದಲ್ಲಿ ಬೇಗೂರು ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಒತ್ತಾಯಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮಾಡಿದರು.
ಗ್ರಾಮಕ್ಕೆ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ.ಇದರಿಂದಾಗಿ ಶಾಲಾ-ಕಾಲೇಜುಗಳಿಗೆ ಹೋಗಿ ಬರಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಬೇಗೂರ ಗ್ರಾಮದಿಂದ ಶಾಲಾ ಕಾಲೇಜುಗಳಿಗೆ ಹೋಗಲು ಕಲಘಟಗಿಯಿಂದ ಬೇಗೂರ ಮಾರ್ಗವಾಗಿ ಹುಬ್ಬಳ್ಳಿಗೆ ಹೋಗುವ ಬಸ್ ಗಳು ಸರಿಯಾದ ಸಮಯಕ್ಕೆ ಬಸ್ ಬರದೇ ಇರುವದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.ಏಳು ದಿನಗಳ ಒಳಗಾಗಿ ಬಸ್ ವ್ಯವಸ್ಥೆ ಮಾಡದೇ ಇದ್ದರೆ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಮನವಿ ನೀಡಿ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಶಿವಲಿಂಗ ಮೂಗಣ್ಣವರ, ಹರೀಶ ಚೆಳಮಟ್ಟಿ ಉಪಸ್ಥಿತರಿದ್ದರು.
Kshetra Samachara
04/02/2021 12:39 pm