ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅನುಭವ ಮಂಟಪದ ಕುರಿತು ಹಸ್ತಪ್ರತಿ ನೀಡಿ ಕವಿವಿಗೆ ಕೇಂದ್ರದಿಂದ ಪತ್ರ

ಧಾರವಾಡ: ನೂತನ ಸಂಸತ್ ಭವನದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಚಿತ್ರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಲ್ಲಿ ಕರ್ನಾಟಕದ ಹೆಮ್ಮೆಯ ಬಸವಣ್ಣನವರ ಅನುಭವ ಮಂಟಪದ ಮಾದರಿ ಪ್ರತಿಬಿಂಬಿಸಲು ಯೋಜಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಕೇಂದ್ರ ಸರ್ಕಾರ ಸೆಂಟ್ರಲ್ ವಿಸ್ಟಾ ಯೋಜನೆಯಡಿ 20 ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಸಂಸತ್ ಭವನ ನಿರ್ಮಿಸುತ್ತಿದೆ. ಇನ್ನೆರಡು ತಿಂಗಳಲ್ಲಿ ಅದು ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಕಟ್ಟಡದಲ್ಲಿ ಸಂವಿಧಾನದ ಗ್ಯಾಲರಿ ನಿರ್ಮಿಸಲಾಗುತ್ತಿದ್ದು, ಅದಕ್ಕಾಗಿ ಬಸವಣ್ಣನವರ ಅನುಭವ ಮಂಟಪಕ್ಕೆ ಸಂಬಂಧಿಸಿದ ಹಸ್ತಪ್ರತಿ, ಕಲಾಕೃತಿ ಸೇರಿದಂತೆ ಲಭ್ಯ ಇರುವ ಅಗತ್ಯ ದೃಶ್ಯ ದಾಖಲೆಗಳನ್ನು ಪೂರೈಸುವಂತೆ ಕೇಂದ್ರ ಸಂಸ್ಕೃತಿ ಸಚಿವಾಲಯವು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯಕ್ಕೆ ಪತ್ರ ಬರೆದಿದೆ.

12 ನೇ ಶತಮಾನದಲ್ಲಿ ಅನುಭವ ಮಂಟಪ ಅಸ್ತಿತ್ವದಲ್ಲಿತ್ತು. ಇಲ್ಲಿ ನಾನಾ ಕ್ಷೇತ್ರಗಳಲ್ಲಿ ಜೀವನಾನುಭವ ಪಡೆದವರು ಚರ್ಚಿಸಿ ಅನುಭವ ಹಂಚಿಕೊಳ್ಳುತ್ತಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ತಳಹದಿ ಜಗತ್ತಿನ ಮೊದಲ ಸಂವಿಧಾನ ಎನಿಸಿಕೊಂಡಿದೆ. ಹೀಗಾಗಿ ನೂತನ ಸಂಸತ್ ಭವನದಲ್ಲಿ ನಿರ್ಮಾಣವಾಗುವ ಸಂವಿಧಾನ ಗ್ಯಾಲರಿಯಲ್ಲಿ ಅನುಭವ ಮಂಟಪದ ಕಲಾಕೃತಿ ಹಾಗೂ ಸಂಬಂಧಿಸಿದ ಹಸ್ತಪ್ರತಿಗಳನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ವಿಶ್ವವಿದ್ಯಾನಿಲಯವು ಈ ಕುರಿತಂತೆ ಈಗಾಗಲೇ ಮಾಹಿತಿ ಸಂಗ್ರಹಿಸಲು ಅಣಿಯಾಗಿದೆ. ಬಸವ ಅಧ್ಯಯನ ಪೀಠ ಹಾಗೂ ಹಿರಿಯ ಸಂಶೋಧಕರೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಒಂದೆರಡು ಸಭೆ ನಡೆಸಿ ಲಭ್ಯ ಇರುವ ಅನುಭವ ಮಂಟಪದ ಮಾಡೆಲ್, ಹಸ್ತಪ್ರತಿ, ಫೋಟೋಗಳ ಡಿಜಿಟಲ್ ಪ್ರತಿಗಳನ್ನು ಕೇಂದ್ರಕ್ಕೆ ಕಳುಹಿಸಲು ಚರ್ಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನೆಲ್ಲ ಹೊಸ ದಾಖಲೆಗಳನ್ನು ನೀಡಬಹುದು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ನಾಮಕರಣ ಮಾಡುವಂತೆ ಕರ್ನಾಟಕ ಲಿಂಗಾಯತ ಮಠಾಧೀಶರು ಒತ್ತಾಯಿಸಿದ್ದರು. ನೂತನ ಕಟ್ಟಡದ ಭೂಮಿಪೂಜೆ ನೆರವೇರಿಸಿದ್ದ ಪ್ರಧಾನಿ ಮೋದಿ ಅವರು, ಅನುಭವ ಮಂಟಪದ ಬಗ್ಗೆ ಮಾತನಾಡಿದ್ದರು. 12ನೇ ಶತಮಾನದಲ್ಲಿ ಇದ್ದ ಅನುಭವ ಮಂಟಪ ನಾಡಿನ ಅಭಿವೃದ್ಧಿ, ಉನ್ನತಿಗೆ ಕೆಲಸ ಮಾಡಿತ್ತು. ಹೀಗಾಗಿ ಈಗ ನೂತನ ಸಂಸತ್ ಭವನದಲ್ಲಿ ಮಾದರಿ ಅನುಭವ ಮಂಟಪದ ಮಾದರಿಗೆ ವಿಶೇಷ ಆದ್ಯತೆ ಸಿಗುವ ನಿರೀಕ್ಷೆ ಮೂಡಿದೆ.

Edited By :
Kshetra Samachara

Kshetra Samachara

27/07/2022 09:58 pm

Cinque Terre

13.46 K

Cinque Terre

0

ಸಂಬಂಧಿತ ಸುದ್ದಿ