ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳ ಉದ್ಧಾರಕ್ಕೆ ನಿಂತ ಜಯ ಕರ್ನಾಟಕ ಜನಪರ ವೇದಿಕೆಯಿಂದ ಮನವಿ

ಹುಬ್ಬಳ್ಳಿ: ಹುಬ್ಬಳ್ಳಿಯ ಗದಗ ರಸ್ತೆಯ ಶಬರಿ ನಗರ ಮದರ್ ಥೆರೇಸಾ ಕಾಲೋನಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ. ಹೀಗಾಗಿ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ವೃತ್ತದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ಸೌಲಭ್ಯ ಇಲ್ಲ. ಶಾಲೆ ಸುಣ್ಣ-ಬಣ್ಣ ಕಂಡು ವರ್ಷಗಳೇ ಕಳೆದಿವೆ.ಶಾಲೆಯಲ್ಲಿ ಪೀಠೋಪಕರಣಗಳು ಕೂಡ ಇಲ್ಲ. ಹೀಗೆ ಹಲವಾರು ಸಮಸ್ಯೆಗಳು ಈ ಶಾಲೆಯಲ್ಲಿವೆ. ಆದಷ್ಟು ಬೇಗ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಕೂಡಲೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಜಯ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

Edited By :
Kshetra Samachara

Kshetra Samachara

29/08/2022 04:36 pm

Cinque Terre

24.91 K

Cinque Terre

1

ಸಂಬಂಧಿತ ಸುದ್ದಿ