ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಸಿ ಕಸ, ಒಣ ಕಸ ಬೇರ್ಪಡಿಸಲು ಜಾಗೃತಿ ಜಾಥಾ

ಧಾರವಾಡ: ಗ್ರಾಮಾಂತರ ಭಾಗದ ಜನರಲ್ಲಿ ಹಸಿ ಕಸ, ಒಣ ಕಸ ಬೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ರೋಟರಿ ಕ್ಲಬ್, ಪೂರ್ಣಚಂದ್ರ ತೇಜಸ್ವಿ ಇಕೋ ಕ್ಲಬ್ ವತಿಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಯಾದವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಈ ಜಾಥಾದಲ್ಲಿ ಪಾಲ್ಗೊಂಡು ಸಾರ್ವಜನಿಕರ ಗಮನಸೆಳೆದರು.

ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸುವುದರಿಂದ ಆಗುವ ಲಾಭ ಹಾಗೂ ಕಸವನ್ನು ಬೇರ್ಪಡಿಸದೇ ಕಸದ ಡಬ್ಬಿಗೆ ಹಾಕುವುದರಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಈ ಜಾಥಾ ಗ್ರಾಮದ ವಿವಿಧ ಏರಿಯಾಗಳಲ್ಲಿ ಸಂಚರಿಸಿತು. ಆಯೋಜಕರು ಹಾಗೂ ವಿದ್ಯಾರ್ಥಿಗಳು ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸಿ ಕಸದ ವಾಹನಕ್ಕೆ ಹಾಕುವಂತೆ ಮನವಿ ಮಾಡಿದರು.

Edited By :
Kshetra Samachara

Kshetra Samachara

01/10/2022 12:09 pm

Cinque Terre

73.44 K

Cinque Terre

0

ಸಂಬಂಧಿತ ಸುದ್ದಿ