ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 375 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಹಾಸ್ಟೆಲ್‌ಗೆ ಉದ್ಘಾಟನೆ ಭಾಗ್ಯ

ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಅಂದಾಜು 375 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟ್ರಿಕ್ ನಂತರದ ಬಾಲಕಿರ ವಸತಿ ನಿಲಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ನೆರವೇರಿಸಿದರು.

ಕರ್ನಾಟಕ ವಸತಿ ಶಿಕ್ಷಣ ಇಲಾಖೆಯ ವತಿಯಿಂದ 375 ಲಕ್ಷ ಅಂದಾಜು ವೆಚ್ಚದಲ್ಲಿ ಇಂತಹದೊಂದು ಕಾರ್ಯವನ್ನು ಮಾಡಿದ್ದು, ವಿದ್ಯಾರ್ಥಿನಿಯರು ಸರಿಯಾದ ವಸತಿ ವ್ಯವಸ್ಥೆ ಇಲ್ಲದೇ ಶಿಕ್ಷಣದಿಂದ ದೂರ ಉಳಿಯುವಂತಾಗಿದೆ. ಈಗ ಸರ್ಕಾರ ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಇನ್ನೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಯೋಜನೆ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಯೋಜನೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಹಾಗೂ ರಾಜ್ಯ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

05/03/2022 01:14 pm

Cinque Terre

16.74 K

Cinque Terre

0

ಸಂಬಂಧಿತ ಸುದ್ದಿ